(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.27. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಆಗಮಿಸಿದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಓರ್ವ ಮೃತಪಟ್ಟು, ಮಗು ಸಹಿತ ಐವರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಎಂಬಲ್ಲಿ ಮಂಗಳವಾರದಂದು ನಡೆದಿದೆ.
ಮೃತರನ್ನು ಕಾರಿನಲ್ಲಿದ್ದ ಪಡುಬಿದ್ರೆ ನಿವಾಸಿ ನಾಗಭೂಷಣ್ (48) ಎಂದು ಗುರುತಿಸಲಾಗಿದ್ದು, ಕಾರು ಚಾಲಕ ಜಗದೀಶ್ (44), ಮಂಜುಶ್ರೀ (27) ಮನನ್ (2), ಕೃಷ್ಣರಾಜ ಭಟ್ (45), ಸುಬ್ರಹ್ಮಣ್ಯ (55) ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಾಗಭೂಷಣ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.