(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಉಪ ವಿಭಾಗ ಅಧಿಕಾರಿಗಳು, ತಹಶೀಲ್ದಾರ್, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ವೆಬ್ ಸೈಟ್ www.dk.nic.in ನಲ್ಲಿ ಸೆಪ್ಟೆಂಬರ್ 4 ರಂದು ಪ್ರಕಟಿಸಲಾಗಿದೆ.
ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ ಅಥವಾ ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ 7 ದಿನಗಳೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.