ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಸೆ. 6. ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗೋಪನಕೊಪ್ಪ ನಿವಾಸಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬ್ಯಾಂಕ್ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು 10 ಲಕ್ಷ ರೂ. ಗೆ ಬೇಡಿಕೆಯಿಟ್ಟಿದ್ದ ಈತ, ನೌಕರನ ರಕ್ಷಣೆಗೆ ಬಂದವರನ್ನು ತಳ್ಳಿ ಪರಾರಿಯಾಗಿದ್ದ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆರೋಪಿಯು ಷೇರು ಮಾರುಕಟ್ಟೆಯಲ್ಲಿ ಹಣವನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರಿಂದ ಈ ದರೋಡೆ ಕೃತ್ಯಕ್ಕೆ ಮುಂದಾಗಿರುವ ಬಗ್ಗೆ ವಿಚಾರಣೆ ವೇಳೆ ತಿಳಿದು ಬಂದಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಜರುಗಿಸಲಾಗಿದೆ ಎನ್ನಲಾಗಿದೆ.

Also Read  ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!

 

error: Content is protected !!
Scroll to Top