ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಅರ್ಹ ಅಭ್ಯರ್ಥಿಗಳು ಆನ್‍ ಲೈನ್ ವೆಬ್‍ ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ. ಖಾಲಿಹುದ್ದೆಗಳ ವಿವರ ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿಲ್ವಾ ಕ್ರಾಸ್ ರೋಡ್ ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿಗೆ ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group