ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 07. ಗಣಪತಿ ತರಲು ಹೋಗುತ್ತಿದ್ದ ಸಂದರ್ಭ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ

 

ಮೃತಪಟ್ಟವರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದಾಗ ಭೈರಾಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join WhatsApp Group

WhatsApp Share