ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ವರದಿ ತಿಳಿಸಿದೆ.

Also Read  ಬಾಣಂತಿ ಕೊಲೆ ಪ್ರಕರಣ ➤ತಾಯಿ, ತಮ್ಮ ಅರೆಸ್ಟ್!

error: Content is protected !!
Scroll to Top