ಮುಂದಿನ ವಾರ ರಾಹುಲ್ ಗಾಂಧಿ ದಕ್ಷಿಣ ಕನ್ನಡಕ್ಕೆ ► ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.01. ಮುಂದಿನ ವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ‌ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.

‘ಮೂರು ಅಥವಾ ನಾಲ್ಕು ದಿನಗಳ ಕಾಲ ರಾಹುಲ್ ಗಾಂಧಿಯು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ವಿಶೇಷ ಬಸ್ ಮೂಲಕ ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸುವ ಮೂಲಕ ಪ್ರಚಾರ ನಡೆಸಲಿದ್ದಾರೆ. ಮಾರ್ಚ್ 10 ರ ಮೊದಲು ಪ್ರವಾಸದ ದಿನಾಂಕ ನಿಗದಿಯಾಗಲಿದೆ ಎಂದು ಯು.ಬಿ.ವೆಂಕಟೇಶ್ ತಿಳಿಸಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

error: Content is protected !!
Scroll to Top