ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕದ ಉತ್ತರ ತುದಿಯಾದ ಬೀದರ್ ಜಿಲ್ಲೆಯಿಂದ ದಕ್ಷಿಣ ತುದಿಯಾದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿಯನ್ನು ರಚಿಸಿ ಸಂವಿಧಾನದ ಬಗ್ಗೆ ದೇಶದ ನಾಗರಿಕರಲ್ಲಿ ಅರಿವು ಮೂಡಿಸಲು ಸರ್ಕಾರ ಆದೇಶಿಸಿದೆ.


ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿಯನ್ನು ಮುಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ  ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದವರೆಗೆ ರಚಿಸುವ ಮೂಲಕ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top