ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

(ನ್ಯೂಸ್ ಕಡಬ) newskadaba.com ಇಂಫಾಲ್, ಸೆ. 10.  ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಗಸ್ತು ತಿರುಗಲು ಮತ್ತು ವೈಮಾನಿಕ ಸಮೀಕ್ಷೆ ನಡೆಸಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.

Also Read  ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

error: Content is protected !!
Scroll to Top