(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರೀಕರ ಸಹಾಯವಾಣಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕ ಉಸ್ಮಾನ್ ಎ. ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮನೀಶ್ ನಾಯಕ್ ವಂದಿಸಿದರು. ಮಂಗಳೂರು ತಾಲೂಕು ಪಂಚಾಯತ್, ಎಂ.ಆರ್.ಡಬ್ಲೂ ಜಯಪ್ರಕಾಶ್ ಕುಲಾಲ್ ನಿರೂಪಿಸಿದರು. ಬಳಿಕ ಹಿರಿಯ ನಾಗರೀಕರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು.