ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ.


ಅತ್ಯಂತ ವೇಗವಾಗಿ ಬಂದ ಬೈಕ್ ಮತ್ತು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದರಿಂದ ವಿದ್ಯಾರ್ಥಿಗಳ ದೇಹಗಳು ಚೆಲ್ಲಾಪಿಲ್ಲಿ ಆಗಿ, ತುಂಡಾಗಿ ರಸ್ತೆಯ ಮೇಲೆ ಬಿದ್ದಿದ್ದವು. ಡಿಕ್ಕಿ ಹೊಡೆದ ಕಾರು ಅಪಘಾತವಾದ ನಂತರ ನಾಪತ್ತೆಯಾಗಿದೆ. ಹಾಗಾಗಿ, ಇದೊಂದು ಹಿಟ್ ಆ್ಯಂಡ್ ರನ್ ಕೇಸ್ ಎಂದು ಪೊಲೀಸರು ಹೇಳಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Also Read  ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!!

 

error: Content is protected !!
Scroll to Top