ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 12.  ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಜಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಲ್ ಅವರು ತಿಳಿಸಿದರು. ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು ಹೊಸದಿಲ್ಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ(NAAC)ಅಧ್ಯಕ್ಷರಾದ ಪ್ರೊ. ಅನಿಲ್ ಸಹಸ್ರಬುದ್ದೆ ಇವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದರು.

Also Read  ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ

 

 

error: Content is protected !!
Scroll to Top