ನೆಲ್ಯಾಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ

crime, arrest, suspected

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 13. ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಜೀವ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಸತೀಶ ಎಂದು ಗುರುತಿಸಲಾಗಿದೆ. ಪಿಯುಸಿ ವಿದ್ಯಾರ್ಥಿನಿಯು ಕಳೆದ ಜೂನ್ 14ರಂದು ತಾಯಿಯೊಂದಿಗೆ ಪುತ್ತೂರಿನ ಕ್ಲಿನಿಕ್ ಗೆ ಹೋಗುತ್ತಿದ್ದಾಗ ಅಲ್ಲಿಗೆ ಬಂದಿದ್ದ ಆರೋಪಿಯು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಆಕೆಯ ತಾಯಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದು, ಅದೇ ದಿನ ಆರೋಪಿಯು ಮೆಸೇಜ್ ಮಾಡಿ ವಿದ್ಯಾರ್ಥಿನಿಯ ಸಂಪರ್ಕಿಸಿ ಸಲುಗೆಯಿಂದ ಮಾತನಾಡಿದ್ದ. ಬಳಿಕ ಜುಲೈ 21ರಂದು ವಿದ್ಯಾರ್ಥಿನಿಗೆ ಕರೆ ಮಾಡಿ ನೆಲ್ಯಾಡಿಗೆ ಬರಲು ಹೇಳಿದ್ದ. ಅದರಂತೆ ವಿದ್ಯಾರ್ಥಿನಿ ಮನೆಯಲ್ಲಿ ಗೆಳೆಯರೊಂದಿಗೆ ನೆಲ್ಯಾಡಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದಳು. ಅಲ್ಲಿ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪಿಯು ಪಿಕಪ್ ವಾಹನದಲ್ಲಿ ಆಕೆಯನ್ನು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಹೋಗಿ ಒಳರಸ್ತೆಯ ಕಾಡು ಪ್ರದೇಶದಲ್ಲಿ ವಾಹನ ನಿಲ್ಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ವಿದ್ಯಾರ್ಥಿನಿಯನ್ನು ನೆಲ್ಯಾಡಿಯಲ್ಲಿ ಬಿಟ್ಟು ಹೋಗಿದ್ದ ಎನ್ನಲಾಗಿದೆ. ಈ ವಿಚಾರವನ್ನು ಯಾರೆಲ್ಲಾದರೂ ಹೇಳಿದರೆ ಜೀವಂತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಎಂದು ಸಂತ್ರಸ್ತೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top