ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ ಎಂದು ವರದಿ ತಿಳಿಸಿದೆ.

Also Read  ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ

 

error: Content is protected !!
Scroll to Top