ಸೆ.21 ರಂದು ತಣ್ಣೀರುಬಾವಿ ಬೀಚ್ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಭಾರತ ಸರ್ಕಾರದ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇದರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 7ರಿಂದ ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಕ್ಲೀನಿಂಗ್ ಚಟುವಟಿಕೆ/ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪರಿಸರ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top