ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ



(ನ್ಯೂಸ್ ಕಡಬ) newskadaba.com ಹಾವೇರಿ, ಸೆ. 18. ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ನಡೆದಿದೆ.








ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸರ್ವೀಸ್ ರಸ್ತೆಗೆ ಉರುಳಿಬಿದ್ದಿದೆ. ಇದರಿಂದ 15ಕ್ಕೂ ಅಧಿಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.






 

error: Content is protected !!
Scroll to Top