ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

Accident

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರಿನ ತಾಲೂಕಿನ ಸರ್ವೇ ಗ್ರಾಮದ ಭಕ್ತಕೋಡಿಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಬೈಕ್ ಸವಾರ ನವಾಝ್ ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಣಿಯೂರಿನ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನವಾಝ್ ರಸ್ತೆಗೆಸೆಯಲ್ಪಟ್ಟಿದ್ದು ಅವರ ಕಾಲಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದುಬಂದಿದೆ. ತಕ್ಷಣವೇ ಗಾಯಾಳು ನವಾಝ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!

Join the Group

Join WhatsApp Group