ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ.

ಗುರುವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ ವಿಭಾಗದ ಸೇವೆಗಾಗಿ ಹೊಸ ಸರ್ಜಿಕಲ್ ಬ್ಲಾಕ್‍ಗೆ ಭೇಟಿ ನೀಡುವಂತೆ ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top