(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.06. ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಮಂಗಳವಾರದಂದು ನಡೆದಿದೆ.
ಮೃತ ಬೈಕ್ ಸವಾರನನ್ನು ಕೃಷ್ಣಾಪುರ ನಿವಾಸಿ ಗಝಲ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹ ಸವಾರ ಜಾವೀದ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೈಕ್ ನಲ್ಲಿ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ಸಮೀಪ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.