ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ.

ಮಂಗಳೂರು- ಮಡಗಾಂವ್ ಮಧ್ಯೆ ಚಲಿಸುತ್ತಿದ್ದ ರೈಲನ್ನು ಹತ್ತಲು ಮಹಿಳೆ ಓಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸಮಯಪ್ರಜ್ಞೆ ಮೆರೆದ ಆರ್ಪಿಎಫ್ ಮಹಿಳಾ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಇದೀಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

error: Content is protected !!

Join WhatsApp Group

WhatsApp Share