ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಇತ್ತೀಚಿನ ಯುಎಸ್ ಭೇಟಿಯ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಂದ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ.

Scroll to Top