ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೈಯಲ್ಲಿ ಮೊಬೈಲ್ ಕೊಟ್ಟು ಮಗುವಿಗೆ ಆಹಾರ ನೀಡುವುದು ಸರಿಯಲ್ಲ, ಮಕ್ಕಳಿಗೆ ಪ್ರತಿನಿತ್ಯ ಜಂಕ್‍ಫುಡ್ ಗಳನ್ನು ನೀಡಬಾರದು. ಇದು ಮಗುವಿನ ಜೀರ್ಣಕ್ರಿಯೆ ಹಾಗೂ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಮತೋಲನ ಆಹಾರ ಕ್ರಮದಿಂದ ಬೇಗ ಮುಟ್ಟಾಗುವ ಪ್ರಕ್ರಿಯೆಯನ್ನು ಕಾಣುತ್ತೆವೆ ಅವರಿಗೂ ಕೂಡ ಹೆಚ್ಚಿನ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ ಎಂದರು. ಮಾರುಕಟ್ಟೆಯಿಂದ ತರುವ ಕೀಟನಾಶಕ ಸಿಂಪಡಣೆ ಇರುವ ತರಕಾರಿಗಳನ್ನು ಉಪಯೋಗಿಸುವ ಮೊದಲು 20 ನಿಮಿಷ ಉಪ್ಪು ನೀರಿನಲ್ಲಿ ನೆನೆಸಿಟ್ಟು ನಂತರ ಉಪಯೋಗಿಸುವಂತೆ ಡಾ.ಸುಜಯ್ ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಪುಷ್ಟಿ ಆಹಾರ ಪೌಡರ್‍ ನಿಂದ ತಯಾರಿಸಲಾದ ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಕ್ಕಳಿಗೆ ಅನ್ನಪ್ರಾಶನ ನಡೆಸಲಾಯಿತು ಹಾಗೂ 9 ಮಂದಿ ಗರ್ಭಿಣಿಯರಿಗೆ ಸೀಮಂತ ಮಾಡಲಾಯಿತು. ಗರ್ಭಿಣಿಯರಿಗೆ, ಮಕ್ಕಳಿಗೆ ಆಯುಷ್ ಇಲಾಖೆಯ ವತಿಯಿಂದ ನ್ಯೂಟ್ರಿ ಕಿಟ್ ವಿತರಿಸಲಾಯಿತು. ಪುಷ್ಟಿ ಆಹಾರ ಪೌಡರ್‍ ನಿಂದ ಹಾಗೂ ವಿವಿಧ ಪದಾರ್ಥಗಳಿಂದ ತಯಾರಿಸಿದ ಖಾದ್ಯಗಳ ಸ್ವರ್ದೇಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ, ಗ್ರಾಮಾಂತರ ಶಿಶು ಅಭಿವೃದ್ಧಿ ಅಧಿಕಾರಿ ಶೈಲಾ, ಪ್ರೇಮಾ ಮತ್ತಿತರರು ಉಪಸ್ಥಿತರಿದ್ದರು. ಆಯುಷ್ ಇಲಾಖೆಯ ಹೇಮಾಮಾಲಿನಿ ಮಾಹಿತಿಯನ್ನು ನೀಡಿದರು.

error: Content is protected !!

Join WhatsApp Group

WhatsApp Share