(ನ್ಯೂಸ್ ಕಡಬ) newskadaba.com ನವದೆಹಲಿ,ಸೆ. 21. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ ಕ್ಯಾಬಿನೆಟ್ ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.