ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.

ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪ ಬಳಕೆ ಮಾಡಲಾಗುತ್ತಿದೆ. ಆದರೆ ಜಗನ್‌ ರೆಡ್ಡಿ ಸರಕಾರದ ಅವಧಿಯಲ್ಲಿ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ನಿನ್ನೆ ಕೆಎಂಎಫ್‌ ಸ್ಪಷ್ಟನೆ ನೀಡಿತ್ತು.

error: Content is protected !!

Join the Group

Join WhatsApp Group