ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಶ್ವಿನ್

(ನ್ಯೂಸ್ ಕಡಬ) newskadaba.com ಚೆನೈ, ಸೆ.21. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರವಿಚಂದ್ರನ್ ಅಶ್ವಿನ್ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧ 113 ರನ್​ಗಳನ್ನು ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಟೆಸ್ಟ್ ಕ್ರಿಕೆಟ್​ ಪಂದ್ಯದಲ್ಲಿ ಅಶ್ವಿನ್ ಅದ್ಭುತ ಶತಕವನ್ನು ಗಳಿಸಿದರು. ಈ ಮೂಲಕ 36 ವರ್ಷಗಳಲ್ಲಿ ತವರು ನೆಲದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 113 ರನ್ ಗಳಿಸಿದ್ದರು. ಈ ಮೈದಾನದಲ್ಲಿ ಪಂದ್ಯದ ಸುದೀರ್ಘ ಸ್ವರೂಪದಲ್ಲಿ ಇದು ಅವರ ಎರಡನೇ ಶತಕವಾಗಿದೆ. ಇದೀಗ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ 2 ಶತಕ ಹಾಗೂ ಮೂರಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡರು.

Also Read  ರಥಸಪ್ತಮಿಯ ದಿನ ಈ ಒಂದು ವಸ್ತುವನ್ನು ಧಾನವಾಗಿ ನೀಡಿದರೆ ಎಲ್ಲ ರೀತಿಯ ಸಂಕಷ್ಟಗಳು ನಿವಾರಣೆಯಾಗುತ್ತವೆ

 

error: Content is protected !!
Scroll to Top