ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಇದರಿಂದಾಗಿ ಯಾರು ಕೂಡಾ ನೆಮ್ಮದಿಯ ಬದುಕನ್ನು ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.‌

ಸುಳ್ಳು ಸುದ್ದಿಗಳಿಂದ ಸಮಾಜಕ್ಕಾಗುವ ಅನಾಹುತಗಳಿಗೆ ಉದಾಹರಣೆ ನೀಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರು ಹೇಳಿರುವ “ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂಬ ಮಾತನ್ನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದ್ದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹೀಗಾಗಿ ಸುಳ್ಳು ಸುದ್ದಿ ಸೃಷ್ಟಿಸುವವರ ವಿರುದ್ದ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕಾನೂನು ಮಾಡಲಾಗಿದ್ದು, ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

error: Content is protected !!

Join the Group

Join WhatsApp Group