(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 23. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಭೇಟಿ ನೀಡಿರುವುದರಿಂದ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ ಜಯ ಸಾಧಿಸಿದೆ. ಕಳ್ಳಸಾಗಣೆ ಮಾಡಲಾಗಿದ್ದ 297 ಪುರಾತನ ವಸ್ತುಗಳನ್ನು ಅಮೆರಿಕ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ.
‘ಸಾಂಸ್ಕೃತಿಕ ಸಂಪರ್ಕವನ್ನು ಆಳಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧದ ಹೋರಾಟವನ್ನು ಬಲಪಡಿಸುವುದಕ್ಕಾಗಿ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ್ದಕ್ಕಾಗಿ ನಾನು ಅಧ್ಯಕ್ಷ ಜೋ ಬೈಡನ್ ಮತ್ತು ಯುಎಸ್ ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ’ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Also Read ಈ 8 ರಾಶಿಯವರಿಗೆ, ವಿವಾಹ ಯೋಗ, ವ್ಯಾಪಾರ ಅಭಿವೃದ್ಧಿ, ಮನೆಯಲ್ಲಿನ ಸಮಸ್ಯೆ ಗಂಡ-ಹೆಂಡತಿ ಕಲಹ ದೂರವಾಗುತ್ತದೆ