ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಮಗುವೊಂದನ್ನು ಚಿಕಿತ್ಸೆಗೆಂದು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ.


ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

 

Scroll to Top