ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪರಿವಾರಕಾನ ಎಂಬಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಇದೀಗ ಅದರ ಗುರುತು ಪತ್ತೆಯಾಗಿದೆ.

ಶವವಾಗಿ ಪತ್ತೆಯಾದವನನ್ನು ಮನೋಹರ್ ಎಂದು ಗುರುತಿಸಲಾಗಿದ್ದು ಈತ ಮದ್ಯ ವ್ಯಸನಿಯಾಗಿದ್ದ ಎಂದು ಹೇಳಲಾಗುತ್ತಿದೆ. ಸದ್ಯ ವ್ಯಕ್ತಿಯ ಸಾವಿಗೆ ಕಾರಣವೇನೆಂಬುದು ತಿಳಿಯದೇ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆಯಿಂದಷ್ಟೇ ಹೊರಬರಬೇಕಿದೆ.

error: Content is protected !!