ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೆ. 24. ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ.


ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸೇವಂತ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ತಲೆಗೆ ವಿಪರೀತ ಪೆಟ್ಟಾಗಿದ್ದರಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

Scroll to Top