ಜಮ್ಮು-ಕಾಶ್ಮೀರ ಚುನಾವಣೆ: 2ನೇ ಹಂತದ ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 25. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಜಿಲ್ಲೆಗಳ 26 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. 40 ವಿಧಾನಸಭಾ ಸ್ಥಾನಗಳಿಗೆ ಮೂರನೇ ಹಂತದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.

Also Read  ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ

 

error: Content is protected !!
Scroll to Top