ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸೆ. 25. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದೆ.


ಆದರೆ ಇಂದು ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕುಮಾರಾಕೃಪಾ ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

error: Content is protected !!

Join the Group

Join WhatsApp Group