‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.25) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಇರ್ತಾರೆ. ಸದ್ಯಕ್ಕೆ ಬದಲಾವಣೆ ಚರ್ಚೆ ನಡೆದಿಲ್ಲ ಎಂದರು.

Also Read  ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

error: Content is protected !!
Scroll to Top