ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 110/33/11ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಮಾರ್ಗ ಹಾಗೂ 33/11 ಕೆವಿ ಕ್ಯಾಂಪ್ಕೊ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಹಾಗೂ 110/33/11ಕೆವಿ ಪುತ್ತೂರು, 33/11ಕೆವಿ ಕ್ಯಾಂಪ್ಪೋ, ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group