ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು

Crime

(ನ್ಯೂಸ್ ಕಡಬ) newskadaba.com ಸೆ. 26. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆಗೆ ಸಮಬಂಧಿಸಿದ ಆರೋಪಿಯೋರ್ವ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರ ಕೈ ಸೇರಿದೆ.

ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್, ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವೇನೆಂಬುವುದನ್ನು ಡೆತ್ ನೋಟ್‌ ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿದ್ದ ಡೆತ್‌ನೋಟ್ ನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ವರದಿಯ ಪ್ರಕಾರ ಡೆತ್ ನೋಟ್ ನಲ್ಲಿ ಸೆಪ್ಟೆಂಬರ್ 3 ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಆರೋಪಿ ಮುಕ್ತಿ ರಂಜನ್ ರಾಯ್ ಉಲ್ಲೇಖಿಸಿದ್ದಾನೆ. ಸೆ.3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದೇನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್‌ನೋಟ್‌ ಬರೆದುಕೊಂಡಿರುವುದಾಗಿ ತಿಳಿದುಬಂದಿದೆ.

Scroll to Top