ಮಡಂತ್ಯಾರು: ಬೈಕ್ – ಲಾರಿ ಅಪಘಾತ ► ಬೈಕ್ ಸವಾರ ಕಡಬ ನಿವಾಸಿ ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಮಾ.10. ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಕಡಬ ನಿವಾಸಿ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿ ಗುರುವಾರದಂದು ನಡೆದಿದೆ.







ಗಾಯಾಳುವನ್ನು ಕಡಬ ಗ್ರಾಮದ ಕಳಾರ ನಿವಾಸಿ ಸಾಯಿಪ್ರಸಾದ್ (40) ಎಂದು ಗುರುತಿಸಲಾಗಿದೆ. ಸಹ ಸವಾರ ಎಡಮಂಗಲ ನಿವಾಸಿ ಕಮಲಾಕ್ಷ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಳೆದ ಕೆಲ ಸಮಯಗಳ ಹಿಂದೆ ತನ್ನ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಸಾಯಿಪ್ರಸಾದ್ ಇತ್ತೀಚೆಗೆ ಚೇತರಿಸಿಕೊಂಡಿದ್ದರು. ಗುರುವಾರದಂದು ಬೆಳ್ತಂಗಡಿಗೆ ತೆರಳುತ್ತಿದ್ದಾಗ ಮಡಂತ್ಯಾರು ಸಮೀಪ ಎದುರಿನಿಂದ ಸಾಗುತ್ತಿದ್ದ ಲಾರಿಯನ್ನು ಅದರ ಚಾಲಕ ಯಾವುದೇ ಮುನ್ಸೂಚನೆ ನೀಡದೆ ನಿಲ್ಲಿಸಿದ್ದರಿಂದ ಸಾಯಿಪ್ರಸಾದ್ ಚಲಾಯಿಸುತ್ತಿದ್ದ ಬೈಕ್ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ತಲೆಯಲ್ಲಿದ್ದ ಹೆಲ್ಮೆಟ್ ಕೂಡಾ ಹುಡಿಯಾಗಿದ್ದು, ಗಂಭೀರ ಗಾಯಗೊಂಡ ಸಾಯಿಪ್ರಸಾದ್ ರವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top