ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!?

(ನ್ಯೂಸ್ ಕಡಬ) newskadaba.com ಸೆ. 27. ಲೋಕಾಯುಕ್ತ ಬಳಿಕ ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಕುರಿತು ವರದಿಯಾಗಿದೆ.


ವರದಿಯ ಪ್ರಕಾರ ಸಿಎಂ ಎ1 ಆರೋಪಿಯಾದರೆ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯರವರ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೆ, ಎ4 ಆರೋಪಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ಮೈಸೂರಿನ ಲೋಕಾಯುಕ್ತ ಎಸ್ಪಿಗೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿತ್ತು. ಅದರಂತೆ ಇಂದು ಮೈಸೂರಿನ ಲೋಕಾಯುಕ್ತ ಎಸ್ಪಿ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group