ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೆ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Also Read  ? ಸೌದೆ ತರಲೆಂದು ತೋಟಕ್ಕೆ ತೆರಳಿದ್ದ ಬಾಲಕನನ್ನು ತಿಂದು ತೇಗಿದ ಹುಲಿ..!

 

error: Content is protected !!
Scroll to Top