ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27 ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ ಜುಲೈ ತಿಂಗಳ ಹಣ ದೊರೆಯಲಿದೆ. ಮಹಿಳೆಯರ ಖಾತೆಗೆ ಕಳೆದೆರಡು ತಿಂಗಳ ಹಣ ಬರಬೇಕಿದ್ದು, ಇದರಲ್ಲಿ ಒಂದು ತಿಂಗಳ ಹಣ ಜಮಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಜೂನ್‌ ತಿಂಗಳ ಹಣ ಬಂದಿತ್ತು. ಆದರೆ ಸೆಪ್ಟೆಂಬರ್‌ ಮುಗಿಯುತ್ತಾ ಬಂದರೂ ಜುಲೈ ಹಾಗೂ ಆಗಸ್ಟ್‌ ತಿಂಗಳ ಹಣ ಬಂದಿಲ್ಲ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಒಂದಾಗಿದೆ.

Also Read  ಮಂಗಳೂರು ನಗರ ಪೊಲೀಸ್ ಘಟಕದಲ್ಲಿ ವಾಹನಗಳ ಬಿಡಿಭಾಗಗಳ ಹರಾಜು

error: Content is protected !!
Scroll to Top