ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂ. ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ” ಎಂದರು.

Also Read  ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

error: Content is protected !!
Scroll to Top