ಜಮೀರ್ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ



(ನ್ಯೂಸ್ ಕಡಬ) newskadaba.com ಸೆ. 28 ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್‌ ಎಂದಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.







ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎಂದು ಜಮೀರ್ ಅಹ್ಮದ್ ಖಾನ್ ಕರೆದಿದ್ದರು. ಹೀಗಾಗಿ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.






error: Content is protected !!
Scroll to Top