ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!



(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ.







ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.






 

error: Content is protected !!
Scroll to Top