ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

(ನ್ಯೂಸ್ ಕಡಬ)newskadaba.com,ನವದೆಹಲಿ (.02)  ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಬಳಿಕ 5858.60 ಕೋಟಿ ರೂ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಕೇಂದ್ರ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಮುಂಗಡವಾಗಿ ಬಿಡುಗಡೆ ಮಾಡಿದೆ.

ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 189.20 ಕೋಟಿ ರೂ., ಕೇರಳಕ್ಕೆ 145.60 ಕೋಟಿ ರೂ., ಮಣಿಪುರಕ್ಕೆ 50 ಕೋಟಿ ರೂ., ಮಿಜೋರಾಂಗೆ ತಲಾ 21.60 ಕೋಟಿ ರೂ., ನಾಗಾಲ್ಯಾಂಡ್‌ಗೆ 19.20 ಕೋಟಿ ರೂ., ಸಿಕ್ಕಿಂಗೆ 23.60 ಕೋಟಿ ರೂ., ತೆಲಂಗಾಣಕ್ಕೆ 416.80 ಕೋಟಿ ರೂ., ತ್ರಿಪುರಾಕ್ಕೆ 25 ಕೋಟಿ ರೂ. ಮತ್ತು ಪಶ್ಚಿಮ ಬಂಗಾಳಕ್ಕೆ 468 ಕೋಟಿ ರೂ. ಬಿಡುಗಡೆ ಮಾಡಿದೆ.

Also Read  ಮತ್ತೊಮ್ಮೆ ದಾಖಲೆ ಮಟ್ಟ ತಲುಪಿದ ಸೆನ್ಸೆಕ್ಸ್ ಮತ್ತು ನಿಫ್ಟಿ-50; ಹೂಡಿಕೆದಾರರಿಗೆ ಹೊಡೆಯಿತು ಜಾಕ್ಪಾಟ್!

error: Content is protected !!
Scroll to Top