ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ

(ನ್ಯೂಸ್ ಕಡಬ)newskadaba.com, ನವದೆಹಲಿ(.03): ದೇಶಾದ್ಯಂತ ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಿಧ ರಾಜ್ಯಗಳ ಜೈಲು ಕೈಪಿಡಿಗಳಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಬೇಕೆಂದ ಸುಪ್ರೀಂ ಕೋರ್ಟ್ ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಸಮಾನವಾಗಿ ಪರಿಗಣಿಸಬೇಕು ಎಂದು ಹೇಳಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಜೈಲು ಕೈದಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಸುಕನ್ಯಾ ಶಾಂತ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

Also Read  ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ

error: Content is protected !!
Scroll to Top