ವೈದ್ಯಕೀಯ ಉಪಕರಣ ಲ್ಲಿ ಖರೀದಿಯ117 ಕೋಟಿ ಭ್ರಷ್ಟಚಾರ

(ನ್ಯೂಸ್ ಕಡಬ)newskadaba.com, ಕಲಬುರಗಿ(.03): ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿ ಬಂದಿದ್ದು, ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಬಿಜೆಪಿಯ ಹಿಂದುಳಿದ ವರ್ಗ ಮೋರ್ಚಾದ ನಗರ ಜಿಲ್ಲಾ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಒತ್ತಾಯಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ ಎನ್ನಲಾಗಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣಗಳನ್ನು ಖರೀದಿಸಿದ್ದು, 176.70 ಕೋಟಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ.

Also Read  ಅರಂತೋಡು: ಹೆಣ್ಣು ಮಕ್ಕಳ 'ಶಿಶು ಪ್ರದರ್ಶನ' ಕಾರ್ಯಕ್ರಮ


ಟೆಂಡರ್ ಕರೆಯಲು ಕಂಪೆನಿ ಹೆಸರನ್ನು ಬದಲಿಸಿದ್ದು, ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವರು, ಈ ಹಗರಣದಲ್ಲಿ ಭಾಗವಹಿಸಿದ ಸುದ್ದಿ ಇದೆ. ಇದರಿಂದ ಸರಕಾರಕ್ಕೆ 117 ಕೋಟಿ ನಷ್ಟವಾಗಿದೆ. ಡಾ.ಶರಣಪ್ರಕಾಶ್ ಪಾಟೀಲ್, ಅಧಿಕಾರಿಗಳು, ಉಪಕರಣ ಸರಬರಾಜು ಮಾಡಿದ ಸಂಸ್ಥೆಗೆ ಇದರ ಲಾಭ ಆಗಿರುವ ಸಾಧ್ಯತೆ ಇದೆ. ಹಿಂದೆ 50 ಉಪಕರಣ ಪೂರೈಕೆ ಮಾಡಿದ ಕೇರಳ ವೈದ್ಯಕೀಯ ಸೇವಾ ನಿಗಮದ ಎಂ.ಎಸ್.ಕ್ರಿಯೇಟಿವ್ ಹೆಲ್ತ್ ಟೆಕ್ ಪ್ರೈವೆಟ್ ಲಿಮಿಡೆಟ್ ಸಂಸ್ಥೆ ಇದೇ ಮಾಡ್ಯುಲರ್ ಥಿಯೇಟರ್ ಉಪಕರಣಕ್ಕೆ ಪ್ರತಿಯೊಂದಕ್ಕೆ 49.70 ಲಕ್ಷದ (ಸುಮಾರು 50 ಲಕ್ಷ) ಟೆಂಡರ್‍ಗೆ ಹಾಕಿದ್ದರು. 3 ವರ್ಷ ವಾರಂಟಿ ಎಂದು ತಿಳಿಸಿದೆ.

Also Read  ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

error: Content is protected !!
Scroll to Top