ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (.04):  ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ನಡೆಸುತ್ತಿದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ವಿಚಾರಣೆ ನಡೆಸಿದೆ.

error: Content is protected !!

Join the Group

Join WhatsApp Group