ಪಡುಬಿದ್ರೆ: ಖಾಸಗಿ ಬಸ್ಸುಗಳ ನಡುವಿನ ಪೈಪೋಟಿ ► ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬಸ್ – ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಮಾ.12. ಖಾಸಗಿ ಬಸ್ಸುಗಳೆಡರಡರ ನಡುವಿನ ಪೈಪೋಟಿಯಿಂದಾಗಿ ಎಕ್ಸ್‌ಪ್ರೆಸ್‌ ಬಸ್ಸೊಂದು ಮಗುಚಿ ಬಿದ್ದ ಘಟನೆ ಉಡುಪಿ – ಮಂಗಳೂರು ಹೆದ್ದಾರಿಯ ಹೆಜಮಾಡಿ ಟೋಲ್ ಗೇಟ್ ಬಳಿ ಸೋಮವಾರದಂದು ನಡೆದಿದೆ.

ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ರಾಜ್ ಕುಮಾರ್ ಹೆಸರಿನ ಖಾಸಗಿ ಎಕ್ಸ್‌ಪ್ರೆಸ್‌ ಬಸ್ ಮುಂದಿನ ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಿರು ಸೇತುವೆಯ ಬಳಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸುರತ್ಕಲ್ ಸಮೀಪದ ಮುಕ್ಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Scroll to Top