ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ – ಅಪಘಾತ ಸ್ಥಿತಿಯಲ್ಲಿ ಸೇತುವೆ ಬಳಿ ಕಾರು ಪತ್ತೆ

(ನ್ಯೂಸ್ ಕಡಬ) newskadaba.com ಕೂಳೂರು, ಅ. 06. ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ರವಿವಾರದಂದು ಬೆಳಗ್ಗೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.


ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ. ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ ಕೂಡ ರವಾನಿಸಿದ್ದಾರೆ ಎನ್ನಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

error: Content is protected !!

Join the Group

Join WhatsApp Group