ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹವು ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರದಂದು ಬೆಳಗ್ಗೆ ಪತ್ತೆಯಾಗಿದೆ.

ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೇ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

Scroll to Top