ಪೊಲೀಸರ ಮೇಲೆ ಹಲ್ಲೆಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಡೇಟು



(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಅ. 07. ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.








ಆರೋಪಿಯನ್ನು ಹಬೀಬುಲ್ಲಾ ಅಲಿಯಾಸ್ ಅಮ್ಮು ಎಂದು ಗುರುತಿಸಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಗರುಡ ಲೇಔಟ್ ಬಳಿ ಬಂಧಿಸಲು ಹೋದಾಗ ಆರೋಪಿಯು ಜಯಪ್ಪ ಎನ್ನುವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ತುಂಗಾ ನಗರ ಸಿಪಿಐ ಕೆ.ಟಿ ಗುರುರಾಜ್ ಅವರು ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ.






 

error: Content is protected !!
Scroll to Top